ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಬೋಳೂರು ಹಾಗೂ ನಂದಿಗುಡ್ಡೆ ಸ್ಮಶಾನಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಚಿತಾಗಾರಗಳ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಬಹುತೇಕ ಕೋವಿಡ್ ಸೋಂಕಿನಿಂದ ಮೃತಪಟ್ಟ ಶವ ಸಂಸ್ಕಾರಗಳನ್ನು ನಂದಿಗುಡ್ಡೆ ಹಾಗೂ ಬೋಳೂರಿನ ಚಿತಾಗಾರದಲ್ಲಿ ನಡೆಸಲಾಗುತ್ತಿದೆ. ಕೋವಿಡ್ ಸೋಂಕಿತರ ಅಂತ್ಯ ಸಂಸ್ಕಾರದ ಖರ್ಚನ್ನು ಮಂಗಳೂರು ಮಹಾನಗರ ಪಾಲಿಕೆ ಭರಿಸುತ್ತಿದ್ದು, ಆ ನಿಟ್ಟಿನಲ್ಲಿ ಇಂದು ಸ್ಮಶಾನಗಳಿಗೆ ಭೇಟಿ ನೀಡಲಾಗಿದೆ ಎಂದರು.
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರ ಸಹಿತ ವಿವಿಧ ಸಂಸ್ಥೆಗಳು ಕೋವಿಡ್ ಸೋಂಕಿತರ ಶವಸಂಸ್ಕಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಅತ್ಯಂತ ಧೈರ್ಯದಿಂದ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಶವಸಂಸ್ಕಾರ ಮಾಡುತ್ತಿರುವ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈಗಾಗಲೇ ಸಂಸದರ ಕೋವಿಡ್ ವಾರ್ ರೂಂನಲ್ಲಿ ಶವಸಂಸ್ಕಾರಕ್ಕೆ ನಿಯೋಜಿಸಿರುವ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಗಣೇಶ್ ಕುಲಾಲ್ ಅವರು ಬೋಳೂರಿನ ಚಿತಾಗಾರದಲ್ಲಿ ನಿತಂತರವಾಗಿ ಕೋವಿಡ್ ಸೋಂಕಿತರ ಶವ ಸಂಸ್ಕಾರ ಮಾಡಿದ್ದಾರೆ. ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರು ಶಾಲುಹೊದೆಸಿ ಗೌರವಸಲ್ಲಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಶೈಲೇಶ್ ಶೆಟ್ಟಿ ಅತ್ತಾವರ, ಭರತ್ ಸೂಟರ್`ಪೇಟೆ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಮಂಡಲ ಉಪಾಧ್ಯಕ್ಷ ಕಿರಣ್ ರೈ ಬಜಾಲ್, ಬಿಜೆಪಿ ಮುಖಂಡರಾದ ಮೋಹನ್ ಆಚಾರ್, ರಾಹುಲ್ ಶೆಟ್ಟಿ, ಸಂದೀಪ್ ಬೋಳೂರು, ರೋಷನ್ ರೊನಾಲ್ಡ್, ಘನಶ್ಯಾಮ್ ಅತ್ತಾವರ, ವಸಂತ್ ಜೆ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
Comments are closed.