ಕರಾವಳಿ

ರಾಜ್ಯದಲ್ಲಿ ಮತ್ತೆ 14 ದಿನ ಲಾಕ್​ಡೌನ್ ವಿಸ್ತರಣೆ : ಜೂನ್ 7ರ ವರೆಗೆ ಕಠಿಣ ರೂಲ್ಸ್‌ನೊಂದಿಗೆ ಲಾಕ್​ಡೌನ್

Pinterest LinkedIn Tumblr

ಬೆಂಗಳೂರು : ರಾಜ್ಯದಲ್ಲಿ ಮತ್ತೆ 14 ದಿನ ಲಾಕ್​ಡೌನ್ ವಿಸ್ತರಿಸಲಾಗಿದ್ದು, ಜೂನ್ 7ರ ಬೆಳಗ್ಗೆ 6ರವರೆಗೂ ಕಠಿಣ ರೂಲ್ಸ್‌ನೊಂದಿಗೆ ಲಾಕ್​ಡೌನ್​ ಮುಂದುವರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಮಿತಿಮೀರಿರುವ ಕರೊನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ತರುವ ಸಲುವಾಗಿ ಈಗಾಗಲೇ ವಿಧಿಸಲಾಗಿರುವ ಲಾಕ್​ಡೌನ್​ ಇನ್ನೆರಡು ದಿನಗಳಲ್ಲಿ ಮುಗಿಯಲಿದೆ.

ಈ ನಡುವೆ ಇನ್ನೂ 14 ದಿನಗಳ ಕಾಲ ಲಾಕ್​ಡೌನ್​ ಮುಂದುವರಿಸಲಾಗಿದೆ. ಅಂದರೆ ಜೂ. 7ರ ಬೆಳಗ್ಗೆ 6 ಗಂಟೆಯವರೆಗೂ ರಾಜ್ಯದಲ್ಲಿ ಲಾಕ್​ಡೌನ್​ ಇರಲಿದೆ. ಈಗಿರುವ ನಿಯಮಗಳೇ ಮುಂದುವರೆಯಲಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ನಮ್ಮ ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಹಳ್ಳಿ ಹಳ್ಳಿಗಳಲ್ಲೂ ಕೊರೊನಾ ಸೋಂಕು ಹರಡುತ್ತಿದ್ದು, ರಾಜ್ಯದ ಜನರ ಹಿತದೃಷ್ಟಿಯಿಂದ ಲಾಕ್ಡೌನ್ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದನ್ನು ತಡೆಯುವ ಉದ್ದೇಶದಿಂದ ಲಾಕ್ಡೌನ್ ಮುಂದುವರಿಸಲಿದ್ದು, ರಾಜ್ಯದ ಜನ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ.

ರಾಜ್ಯದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೇ 24 ರವರೆಗೆ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ತಜ್ಞರ ಅಭಿಪ್ರಾಯ ಪರಿಗಣಿಸಿ ಕಠಿಣ ನಿರ್ಬಂಧವನ್ನು ಮೇ 24 ರಿಂದ ಜೂನ್ 7 ರವರೆಗೆ ಮುಂದುವರೆಸಲಾಗುವುದು ಎಂದು ಹೇಳಿದ್ದಾರೆ.

Comments are closed.