ಕರ್ನಾಟಕ

ವಿಭಿನ್ನ ಮಾದರಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ; ಯಾರನ್ನು ಫೇಲ್ ಮಾಡಲ್ಲ- ಸಚಿವ ಸುರೇಶ್ ಕುಮಾರ್

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಯಾರನ್ನೂ ಫೇಲ್ ಮಾಡಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಳೆದ ಬಾರಿ 9ನೇ ತರಗತಿ ಪರೀಕ್ಷೆಯೂ ನಡೆದಿಲ್ಲ ಆದ್ದರಿಂದ ಎಸ್​ಎಸ್​ಎಲ್​ಸಿ ಮಕ್ಕಳನ್ನು ಕಳೆದ ವರ್ಷದ ಆಧಾರದ ಮೇಲೆ ಪಾಸ್​ ಮಾಡಲಾಗುವುದಿಲ್ಲ. ಕೆಲ ಸಮೀಕ್ಷೆಗಳಲ್ಲಿ ಪರೀಕ್ಷೆ ಬೇಡ ಅನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆದರೆ, ಎಸ್​ಎಸ್​ಎಲ್​ಸಿಗೆ ಪರೀಕ್ಷೆ ನಡೆಸದೇ ಇರುವುದು ಸುಲಭವಿಲ್ಲ. ಈ ಬಾರಿ 8 ಲಕ್ಷ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದಾರೆಂದು ಹೇಳಿದ್ದಾರೆ.

ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಈ ಮೂರು ವಿಷಯಗಳನ್ನು ಸೇರಿಸಿ ಒಂದು ಪೇಪರ್ ನೀಡಲಾಗುತ್ತದೆ​, ಬಹು ಆಯ್ಕೆ (ಮಲ್ಟಿಪಲ್ ಛಾಯ್ಸ್) ಪ್ರಶ್ನೆಗಳನ್ನು ಕೇಳಲಾಗುವುದು. ಪ್ರಶ್ನೆಗಳು ಸರಳ ಹಾಗೂ ನೇರವಾಗಿರಲಿದ್ದು, ವಿದ್ಯಾರ್ಥಿಗಳು ಆತಂಕಪಡುವ ಆಗತ್ಯವಿಲ್ಲ. ಇದೇ ರೀತಿ ಇನ್ನೊಂದು ಪತ್ರಿಕೆ ಭಾಷಾ ವಿಷಯಗಳು ಇರಲಿವೆ ಎಂದು ತಿಳಿಸಿದ್ದಾರೆ.

ಶೀಘ್ರವೇ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡುತ್ತೇವೆ. ಪರೀಕ್ಷ ದಿನಾಂಕವನ್ನು ಇಪ್ಪತ್ತು ದಿನಗಳ ಮೊದಲೇ ತಿಳಿಸುತ್ತೇವೆ. ಅಂದಾಜು ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ಬರಲಿದೆ. ಒಂದು ಕೊಠಡಿಯಲ್ಲಿ 10ರಿಂದ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಎನ್- 95 ಮಾಸ್ಕ್ ವಿತರಣೆ ಮಾಡಲಾಗುತ್ತದೆ.

Comments are closed.