ಕರಾವಳಿ

ಕೇರಳಕ್ಕೆ ಸಾಗಿಸುತ್ತಿದ್ದ 10 ಲಕ್ಷ ಮೌಲ್ಯದ ನಿಷೇಧಿತ ಎಂಡಿಎಂಎ ಪತ್ತೆ : ಮೂವರ ಬಂಧನ -17,37,000 ರೂ ಮೌಲ್ಯದ ಸೊತ್ತು ವಶ

Pinterest LinkedIn Tumblr

ಮಂಗಳೂರು, ಜೂನ್ 04 : ನಿಷೇಧಿತ ಮಾದಕ ವಸ್ತುಎಂಡಿಎಂಎ ಅನ್ನು ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಉಪ್ಪಳದ ಮೂವರನ್ನು ಶುಕ್ರವಾರ ಕೊಣಾಜೆಯ ಗಣೇಶ್ ಮಹಲ್ ನಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.

ಅಕ್ರಮವಾಗಿ ಮಾದಕ ವಸ್ತುವನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಮಂಜೇಶ್ವರ ಉಪ್ಪಾಳ ಗೇಟ್ ಬಳಿಯ ಮಹಮ್ಮದ್ ಮುನಾಫ್, ಮಹಮ್ಮದ್ ಮುಝಾಂಬಿಲ್ ಮತ್ತು ಅಹಮ್ಮದ್ ಮಸೂಕ್ ಎಂದು ಹೆಸರಿಸಲಾಗಿದೆ.

ಕೊಣಾಜೆ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಹಾಯಕ ಪೊಲೀಸ್ ಆಯುಕ್ತರಾದ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಗಿದೆ.

ಬಂಧಿತರಿಂದ 170 ಗ್ರಾಂ ತೂಕದ 10,20,000 ರೂ. ಮೌಲ್ಯದ ಎಂಡಿಎಂಎ ಮಾತ್ರೆಯನ್ನು ವಶಪಡಿಸಿ ಕೊಳ್ಳಲಾಗಿದೆ ಹಾಗು ಒಂದು ಕಾರು ಮತ್ತು ಮೊಬೈಲ್ ಗಳನ್ನೂ ವಶಕ್ಕೆ ಪಡೆದುಕೊಳ್ಳಲಾಗಿದೆ.

ಆರೋಪಿಗಳಿಂದ ಒಟ್ಟು 17,37,000 ರೂ ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಲಾಗಿದೆ. ಎಂದು ಮಂಗಳೂರು ನಗರ ಪೊಲೀಸ್ ಅಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತರಲ್ಲಿ ಮುನಾಫ್ ಬಿಬಿಎ ಓದಿದ್ದು , ಮುಝಾಂಬಿಲ್ ಬೆಂಗಳೂರಿನ ನೆಲಮಂಗಲ ಸ್ಪೋಟ್ಸ್ ಶಾಪ್ ನಲ್ಲಿ ಹಾಗೂ ಮಸೂಕ್‌ ಜೆ.ಪಿ.ನಗರದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಆರೋಪಿಗಳು ಬೆಂಗಳೂರಿನಲ್ಲಿ ಆಫ್ರಿಕನ್ ಪ್ರಜೆಯೊಬ್ಬರಿಂದ ಡ್ರಗ್ಸ್ ಪಡೆದು ಅದನ್ನು ಮಂಗಳೂರು, ಉಪ್ಪಳ ಮತ್ತು ಕಾಸರಗೋಡಿನ ಪ್ರದೇಶಗಳಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕೊಣಾಜೆಯ ಗಣೇಶ್ ಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.

Comments are closed.