ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಸಮೀಪದ ಮಿಲನ ರೆಸಿಡೆನ್ಸಿ ಅಪಾರ್ಟ್ ಮೆಂಟ್ ನಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಆಕೆಯ ಪತಿ ರಾಮಕೃಷ್ಣ ಗಾಣಿಗ ಸೇರಿದಂತೆ ಇನ್ನೋರ್ವ ಸುಪಾರಿ ಕಿಲ್ಲರ್ ನನ್ನು ಬಂಧಿಸಿದ್ದಾರೆ.
ಸೋಮವಾರ ಬಂಧಿಸಲ್ಪಟ್ಟ ಪತಿ ರಾಮಕೃಷ್ಣ ಗಾಣಿಗನನ್ನು ಪ್ರಕರಣದ ತನಿಖಾಧಿಕಾರಿಯಾಗಿರುವ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಮಂಗಳವಾರ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಜು.23ರಂದು ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಕೊಲೆ ಕೃತ್ಯವನ್ನು ಇಬ್ಬರು ಸುಪಾರಿ ಕಿಲ್ಲರ್‌ಗಳು ಎಸಗಿದ್ದು, ಅದರಲ್ಲಿ ಓರ್ವನನ್ನು ಪೊಲೀಸ್ ತಂಡ ಉತ್ತರ ಪ್ರದೇಶದಲ್ಲಿ ಬಂಧಿಸಿ ಉಡುಪಿಗೆ ಕರೆದುಕೊಂಡು ಬರುತ್ತಿದೆ. ಇನ್ನೋರ್ವ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎನ್ನಲಾಗಿದೆ. ನಾಳೆ ಉಡುಪಿಯಲ್ಲಿ ಎಸ್ಪಿ ವಿಷ್ಣುವರ್ಧನ್ ಅವರು ಪತ್ರಿಕಾಗೋಷ್ಠಿ ನಡೆಸಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.
Comments are closed.