ಬೆಳಗಾವಿ: ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿದ ಘಟನೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ಮತ್ತೊಂದು ದುಷ್ಕೃತ್ಯದ ಬಗ್ಗೆ ವರದಿಯಾಗಿದೆ.
(ಸಾಂದರ್ಭಿಕ ಚಿತ್ರ)
15 ವರ್ಷದ ಅಪ್ರಾಪ್ತ ಬಾಲಕಿಯನ್ನು ನಾಲ್ವರು ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ ಠಾಣೆಯ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಜುಲೈ 12 ರಂದು ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ತೋಟದಲ್ಲಿರುವ ತನ್ನ ಮನೆಯಿಂದ ಕೆಲಸದ ನಿಮಿತ್ತ ಊರಿಗೆ ಬಂದು ಮರಳಿ ಮನೆಗೆ ಹೋಗುತ್ತಿರುವಾಗ ಅದೆ ಗ್ರಾಮದ ಆರೋಪಿ ಕಾಮುಕರು ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಯಾರು ಇಲ್ಲದನ್ನು ಗಮನಿಸಿ ಅತ್ಯಾಚಾರ ಎಸಗಿದ್ದಾರೆಂದು ಹೇಳಲಾಗುತ್ತಿದೆ. ಕೃತ್ಯ ನಡೆಸಿದ ಬಳಿಕ ಯಾರಿಗಾದರು ಹೇಳಿದರೆ ಬಿಡುವುದಿಲ್ಲ ಎಂದು ಬಾಲಕಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.
ಹೀಗಾಗಿ ಬಾಲಕಿ ಅಂಜಿ ಈ ವಿಚಾರ ಮನೆಯವರಲ್ಲಿ ತಿಳಿಸಿರಲಿಲ್ಲ. ದಿನ ಕಳೆದಂತೆ ಬಾಲಕಿ ಮಾನಸಿಕವಾಗಿ ಕುಂದುತ್ತಿರುವುದನ್ನು ಗಮನಿಸಿದ ಪೋಷಕರು ಸೂಕ್ಷ್ಮವಾಗಿ ವಿಚಾರಿಸಿದಾಗ ನಿಜ ವಿಚಾರ ಬೆಳಕಿಗೆ ಬಂದಿದೆ.
ಈ ಬಗ್ಗೆ ಸಂತ್ರಸ್ತ ಬಾಲಕಿ ಮನೆಯವರು ಘಟಪ್ರಭಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Comments are closed.