ಕರ್ನಾಟಕ

ರಾಜ್ಯದಲ್ಲಿ‌ ಇಂದಿನಿಂದ ಮತ್ತೆರಡು ದಿನ ಬಾರೀ‌ ಮಳೆ ನಿರೀಕ್ಷೆ; 8 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು ಎಂಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

(ಸಾಂದರ್ಭಿಕ ಚಿತ್ರ)

ಬಂಗಾಳ ಉಪಸಾಗರದ ಒಡಿಶಾ ಹಾಗೂ ಆಂಧ್ರ ಪ್ರದೇಶದ ಕರಾವಳಿ ಪ್ರದೇಶದಲ್ಲಿ ವಾಯು ಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಾದ್ಯಂತ ಇಂದಿನಿಂದ (ಭಾನುವಾರ) ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಹನಿ ಮಳೆಯಾಗುತ್ತಿದ್ದರೆ, ರಾಜ್ಯದ ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ ಸೇರಿದಂತೆ ಮತ್ತಿತರ ಕಡೆ ಭಾರೀ ಮಳೆ ಆಗುತ್ತಿದೆ. ಕರಾವಳಿಯಲ್ಲಿ ಎರಡು ದಿನದಿಂದ ಉತ್ತಮ ಮಳೆಯಾಗುತ್ತಿದೆ.

ಕರಾವಳಿ ಹಾಗೂ ಒಳನಾಡು ಸೇರಿದಂತೆ 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜ ನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಾಮರಾಜ ನಗರ, ಮೈಸೂರು, ಕೊಡಗು ಹಾಗೂ ಚಿಕ್ಕ ಮಗಳೂರು ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Comments are closed.