ಉಡುಪಿ: ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ಅವರ ಸ್ಥಾನಕ್ಕೆ 2011 ಬ್ಯಾಚಿನ ಐಎಎಸ್ ಅಧಿಕಾರಿ ಕುರ್ಮಾ ರಾವ್ ಎಂ ಅವರನ್ನು ವರ್ಗಾಯಿಸಿ ಆದೇಶಿಸಲಾಗಿದೆ.
ಕಳೆದೆರಡು ವರ್ಷಗಳಿಂದ ಉಡುಪಿಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ಅವರು ಕೊರೋನಾ ಸಂಗ್ದಿದತೆ ಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಹಿತ ಎಲ್ಲಾ ಇಲಾಖೆಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ಕುಂದಾಪುರ, ಉಡುಪಿ, ಬೈಂದೂರು. ಕಾರ್ಕಳ, ಕಾಪು, ಬ್ರಹ್ಮಾವರ ಸಹಿತ ಜಿಲ್ಲಾದ್ಯಂತ ಸಕ್ರೀಯವಾಗಿ ಕಾರ್ಯ ನಿರ್ವಹಿಸಿದ್ದರು. ಇವರ ಮೇಲುಸ್ತುವಾರಿಕೆಯಲ್ಲಿ ಕುಂದಾಪುರದಲ್ಲಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ರಾಜ್ಯದಲ್ಲೇ ಸರಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಟ್ಟಿನಲ್ಲಿ ಮುಂಚೂಣಿಯಲ್ಲಿತ್ತು, ಅಷ್ಟೇ ಅಲ್ಲ ಇವರ ಕಾರ್ಯವ್ಯಾಪ್ತಿ ನಡುವೆ ಜಿಲ್ಲೆಯಲ್ಲಿ ನಡೆದ ಅತೀ ವ್ರಷ್ಟಿ, ಪ್ರವಾಹ ಸಂದರ್ಭ ಖುದ್ದು ಸ್ಥಳಕ್ಕೆ ಭೇಟಿಯಿತ್ತು ಅಗತ್ಯ ಕ್ರಮಕ್ಕೆ ಮುಂದಾಗಿದ್ದರು.
Comments are closed.