ಕರ್ನಾಟಕ

ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ: ಆಡಿ ಕ್ಯೂ ಕಾರಿನಲ್ಲಿದ್ದ 7 ಮಂದಿ ದುರ್ಮರಣ

Pinterest LinkedIn Tumblr

ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದೆ‌. ಈ ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.

ತಡರಾತ್ರಿ 1:30ರ ವೇಳೆ ಆಡಿ ಕ್ಯೂ 3 ಕಾರು​, ಫುಟ್ ಪಾತ್ ಮೇಲಿದ್ದ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಆಡಿ ಕಾರು ಕಟ್ಟಡಕ್ಕೆ ಅಪ್ಪಳಿಸಿದ್ದು ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರುಣಾಸಾಗರ, ಬಿಂದು, ಇಶಿತಾ, ಡಾ.ಧನುಶಾ, ಅಕ್ಷಯ್ ಗೋಯಲ್, ಉತ್ಸವ್, ರೋಹಿತ್ ಮೃತರು ಎಂದು ಗುರುತಿಸಲಾಗಿದೆ. ಇನ್ನು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತರಿಗೆ ಮರಣೋತ್ತರ ಪರೀಕ್ಷೆ‌ ನಡೆಸಲಾಗುತ್ತದೆ.

ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Comments are closed.