ಬೆಂಗಳೂರು: ಕನ್ನಡ ಚಿತ್ರರಂಗದ ಮುದ್ದು ಮುಖದ ಚೆಲುವೆ ಮೇಘನಾ ರಾಜ್ ಹಾಗೂ ಸರ್ಜಾ ಕುಟುಂಬ ಸೆ.3ರಂದು ಜ್ಯೂನಿಯರ್ ಚಿರುಗೆ ಅದ್ಧೂರಿಯಾಗಿ ನಾಮಕರಣ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಅವರ ಮುದ್ದಿನ ಮಗನಿಗೆ ಇಂದು ನಾಮಕರಣ ಮಾಡಲಾಯಿತು. ಬೆಂಗಳೂರಿನ ಚಾನ್ಸರಿ ಪೆವಿಲಿಯನ್ ಹೊಟೆಲ್ ನಲ್ಲಿ ನಾಮಕರಣ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ.
ದಿವಂಗತ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಅವರ 10 ತಿಂಗಳ ಮಗನಿಗೆ ಆಯ್ಕೆ ಮಾಡಿರುವ ಹೆಸರು ತುಂಬಾ ವಿಭಿನ್ನವಾಗಿದೆ. ಮುದ್ದಾದ ಮಗುವಿಗೆ ‘ರಾಯನ್ ರಾಜ್ ಸರ್ಜಾ’ ಎಂದು ನಾಮಕರಣ ಮಾಡಲಾಗಿದೆ. ಬೆಳಗ್ಗೆಯಿಂದ ಆರಂಭವಾಗಿರುವ ಪೂಜೆಯಲ್ಲಿ ಚಿರಂಜೀವಿ ಸರ್ಜಾ ಪೋಷಕರೂ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಅರ್ಜುನ್ ಸರ್ಜಾ ಭಾಗಿಯಾಗಲಿಲ್ಲ. ಆದರೆ ವಿಡಿಯೋ ಕಾಲ್ ಮೂಲಕ ಲೈವ್ ಆಗಿ ಸಮಾರಂಭ ವೀಕ್ಷಿಸಿದರು.
ನಾಮಕರಣದ ವಿಡಿಯೊವೊಂದನ್ನು ಮೇಘನಾ ರಾಜ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ‘ರಾಯನ್ ರಾಜ್ ಸರ್ಜಾ– ನಮ್ಮ ಯುವರಾಜ’ ಎಂದು ಬರೆದುಕೊಂಡಿದ್ದಾರೆ.
ರಾಯನ್ ರಾಜ್ ಎಂದು ನಾಮಕರಣ ಮಾಡಲಾಗಿದೆ. ಸಂಸ್ಕೃತದಲ್ಲಿ ರಾಯನ್ ರಾಜ್ ಎಂದರೆ ಯುವರಾಜ ಎಂದರ್ಥ.
Comments are closed.