ಚೆನ್ನೈ: ಎರಡು ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರವೇ ಸರ್ಕಾರಿ ಮಳಿಗೆಯಲ್ಲಿ ಮದ್ಯ ಖರೀದಿಗೆ ಅನುಮತಿ ಎಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಜಿಲ್ಲಾಧಿಕಾರಿ ದಿವ್ಯಾ ಆದೇಶ ಹೊರಡಿಸಿದ್ದಾರೆ.
(ಸಾಂದರ್ಭಿಕ ಚಿತ್ರ)
ಕೋವಿಡ್ ಲಸಿಕೆ ಕುರಿತು ಸರ್ಕಾರ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೂ ಕೆಲವೊಂದಿಷ್ಟು ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಜಿಲ್ಲಾಡಳಿತ ಹಲವು ಕಾರ್ಯಕ್ರಮ ಹಮ್ಮಿಕೊಂಡರೂ ನೀಲಗಿರಿ ಜಿಲ್ಲೆಯಲ್ಲಿ ಬಹಳಷ್ಟು ಮಂದಿ ಜನರು ಲಸಿಕೆ ಹಾಕಿಸಿಕೊಳ್ಳಲು ಒಪ್ಪುತ್ತಿಲ್ಲ.
ಇನ್ನು ಒಂದು ವಿಚಾರವೆಂದರೆ ಕುಡುಕರು ನಾನು ಮದ್ಯಪಾನ ಮಾಡಿದ್ದೇನೆ ಸದ್ಯಕ್ಕೆ ನನಗೆ ಕೊರೋನಾ ಲಸಿಕೆ ಬೇಡ ಎಂದು ಹೇಳುತ್ತಿದ್ದಾರಂತೆ. ಮದ್ಯ ಪ್ರಿಯರ ಈ ಮಾತು ಜಿಲ್ಲಾಧಿಕಾರಿಗಳ ಕಿವಿಗಳಿಗೂ ಬಿದ್ದಿದೆ. ಪರಿಣಾಮ ಅವರು ಜಿಲ್ಲಾದ್ಯಂತ ಹೊಸ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಮಳಿಗೆಗಲ್ಲಿ ಮದ್ಯ ಖರೀದಿಸಬೇಕಾದರೆ ಕೋವಿಡ್ ಎರಡೂ ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ತೋರಿಸುವುದು ಕಡ್ಡಾಯ. ಸರ್ಟಿಫಿಕೇಟ್ ತೋರಿಸಿದವರಿಗೆ ಮಾತ್ರ ಮದ್ಯ ನೀಡುವಂತೆ ಜಿಲ್ಲಾಧಿಕಾರಿ ದಿವ್ಯಾ ಖಡಕ್ ಆದೇಶ ಮಾಡಿದ್ದಾರೆ.
ಈ ಆದೇಶದ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ,ಜಿಲ್ಲೆಯಲ್ಲಿ ಈಗಾಗಲೇ ಹಲವು ಬಾರಿ ಲಸಿಕಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಶೇಕಡಾ 97% ಜನರು ಲಸಿಕೆ ಪಡೆಯಲು ಮುಂದೆ ಬಂದಿದ್ದಾರೆ. ಆದರೆ ಮದ್ಯ ಪ್ರಿಯರು ನೆವ ಹೇಳಿ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದು ನಾವು ಈ ಆದೇಶ ಹೊರಡಿಸಿದ್ದೇವೆ ಎಂದಿದ್ದಾರೆ.
Comments are closed.