ಕರ್ನಾಟಕ

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಆಹ್ವಾನ

Pinterest LinkedIn Tumblr

ಬೆಂಗಳೂರು: ನಾಡಹಬ್ಬ ಎಂದೇ ಕರೆಯಲ್ಪಡುವ ಮೈಸೂರು ದಸರಾ ಉದ್ಘಾಟನೆಗೆ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮುಖ್ಯಮಂತ್ರಿಗಳ ಅಧೀಕೃತ ಕಚೇರಿಯಿಂದ ಟ್ವೀಟ್ ಮಾಡಲಾಗಿದ್ದು ‘ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು’ ಎಂದು ತಿಳಿಸಿದ್ದಾರೆ.

(ಕಡತ ಚಿತ್ರ)

ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷವೂ ಸರಳವಾಗಿ ದಸರಾ ಆಚರಿಸಲಾಗುತ್ತಿದ್ದು, ಅ.7 ರಂದು ಬೆಳಿಗ್ಗೆ 8.15 ರಿಂದ 8.45 ರೊಳಗಿನ ಶುಭಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದೆ. ಅ.15 ರಂದು ವಿಜಯದಶಮಿ ದಿನ ಸಂಜೆ 4.36 ರಿಂದ 4.46ರ ಅವಧಿಯಲ್ಲಿ ನಂದಿಧ್ವಜ ಪೂಜೆ ನಡೆಯಲಿದೆ. 5.00 ರಿಂದ 5.30ರ ಒಳಗೆ ಜಂಬೂ ಸವಾರಿ ನಡೆಯಲಿದ್ದು, ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ. ಜಂಬೂ ಸವಾರಿಯಲ್ಲಿ ಎಂಟು ಆನೆಗಳು ಪಾಲ್ಗೊಳ್ಳಲಿವೆ.

ಇನ್ನು ನವರಾತ್ರಿಯ ಅಷ್ಟೂ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Comments are closed.