ಕುಂದಾಪುರ: ಪ್ರಕರಣದ ವಿಚಾರಣೆಗೆ ಕರೆತಂದ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಿ ಶುಕ್ರವಾರ ರಾತ್ರಿ ಹಿಂದೂ ಸಂಘಟನೆಯ ಕಾರ್ಯ ಕರ್ತರು ಕುಂದಾಪುರ ಠಾಣೆಗೆ ಮುತ್ತಿಗೆ ಹಾಕಿದರು.
ಸುರತ್ಕಲ್‌ನಲ್ಲಿ ನಡೆದ ಕಾರ್ಯಕ್ರದಲ್ಲಿ ಚೈತ್ರಾ ಕುಂದಾಪುರ ಮಾಡಿದ ಭಾಷಣದ ತಿರುಚಿದ ವಿಡಿಯೋವನ್ನು ಯುವಕನೊಬ್ಬ ಸ್ಟೇಟಸ್ ಹಾಕಿಕೊಂಡಿದ್ದಾನೆ ಎಂದು ಒಂದಷ್ಟು ಮಂದಿ ಹಲ್ಲೆ ಮಾಡಿದ್ದರು. ಈ ಸಂಬಂಧ ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆತಂದಿದ್ದರು. ವಿಚಾರಣೆ ಬಳಿಕ ಮುಚ್ಚಳಿಕೆ ಬರೆಸಿ ಅವರನ್ನು ಬಿಡಲಾಗಿತ್ತು. ಠಾಣೆಗೆ ಕರೆಸಿದ ಸಂದರ್ಭದಲ್ಲಿ ಹಲ್ಲೆ ನಡೆದಿದೆ ಎಂದು ರಾತೋರಾತ್ರಿ ಹಿಂದೂ ಸಂಘಟನೆ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿದರು.ಪೊಲೀಸರ ನಿರಾಕರಣೆಯನ್ನು ಮಾನ್ಯ ಮಾಡಲಿಲ್ಲ. ಮನವಿಗೆ ಬೆಲೆ ಕೊಡಲಿಲ್ಲ. ಭಜನೆ ಮಾದರಿಯಲ್ಲಿ ಹಾಡುಗಳನ್ನು ಹಾಡುತ್ತಾ ವಿಶಿಷ್ಟವಾಗಿ ಪ್ರತಿಭಟಿಸಿದರು.
ರಾತ್ರಿ ಸ್ಥಳಕ್ಕೆ ಡಿವೈಎಸ್‌ಪಿ ಶ್ರೀಕಾಂತ್, ಇನ್ಸ್‌ಪೆಕ್ಟರ್ ಗೋಪಿಕೃಷ್ಣ ಆಗಮಿಸಿ ಸಮಾಧಾನಪಡಿಸಿದರು.
Comments are closed.