ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ (72) ತಡರಾತ್ರಿ 2 ಗಂಟೆಗೆ ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಸತ್ಯಜಿತ್ ಅವರು 600 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದಾರೆ. ಮೃತದೇಹವನ್ನು ಈಗ ಹೆಗಡೆನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು ಮಧ್ಯಾಹ್ನ 3 ಗಂಟೆಗೆ ಹೆಗಡೆ ನಗರದ ಖಬರ್ ಸ್ಥಾನ್ ದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.
ವೃತ್ತಿಯಲ್ಲಿ ಬಸ್ ಚಾಲಕರಾಗಿದ್ದ ಸತ್ಯಜಿತ್ ನಟನೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಅನೇಕ ಊರುಗಳಿಗೆ ತೆರಳಿ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ಖಳ ನಾಯಕನಾಗಿ, ಹಾಸ್ಯ ನಟನಾಗಿಯೂ ಸತ್ಯಜಿತ್ ಗುರುತಿಸಿಕೊಂಡಿದ್ದರು.
Comments are closed.