ಕರ್ನಾಟಕ

ಪುನೀತ್ ಆರೋಗ್ಯ ಸ್ಥಿತಿ ಬಗ್ಗೆ ಈಗಲೇ ಏನೂ ಹೇಳಲಾಗದು: ಆಸ್ಪತ್ರೆ ವೈದ್ಯರ ಹೇಳಿಕೆ | ಕೆಲವೇ ಕ್ಷಣದಲ್ಲಿ ಹೆಲ್ತ್ ಬುಲೆಟಿನ್ ಸಾಧ್ಯತೆ

Pinterest LinkedIn Tumblr

ಬೆಂಗಳೂರು: ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿರುವುದಾಗಿ ವಿಕ್ರಂ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಪುನೀತ್ ಆರೋಗ್ಯ ಕುರಿತಂತೆ ಹೇಳಿಕೆ ನೀಡಿದ ಆಸ್ಪತ್ರೆ ವೈದ್ಯ ಡಾ. ರಂಗನಾಥ್, ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯಘಾತಕ್ಕೆ ಒಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿರುವುದಾಗಿ ತಿಳಿಸಿದರು. ಕೆಲವೇ ಕ್ಷಣದಲ್ಲಿ ಹೆಲ್ತ್ ಬುಲೆಟಿನ್ ಪ್ರಕಟವಾಗಲಿದ್ದು ಅಭಿಮಾನಿಗಳು ಈಗಾಗಾಲೇ ಕಣ್ಣೀರು ಹಾಕುತ್ತಿದ್ದಾರೆ.

ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಪುನೀತ್ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅವರು ಮಾಹಿತಿ ನೀಡಿದರು.

ಹೃದಯಾಘಾತಕ್ಕೆ ನೀಡಬೇಕಾದ ಚಿಕಿತ್ಸೆಗಳನ್ನು ನೀಡಿದ್ದೇವೆ. ಈಗಲೂ ನಾವು ಅಂತಿಮ ಪ್ರಯತ್ನ ಮಾಡುತ್ತಿದ್ದೇವೆ. ಅವರ ಪರಿಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವೇ ಸಮಯದಲ್ಲಿ ಅವರ ಆರೋಗ್ಯದ ಬಗ್ಗೆ ಮತ್ತೊಮ್ಮೆ ಮಾಹಿತಿ ನೀಡಲಾಗುವುದು ಎಂದು ಡಾ. ರಂಗನಾಥ್ ತಿಳಿಸಿದರು.

Comments are closed.