ಬೆಂಗಳೂರು: ಸ್ಯಾಂಡಲ್ ವುಡ್ ನಟ, ಅಭಿಮಾನಿಗಳ ಪಾಲಿನ ಯುವ ರತ್ನ ಫವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನರಾಗಿದ್ದು ಸಾವಿನಲ್ಲಿಯೂ ಪುನೀತ್ ರಾಜ್ ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ಅವರ ಕಣ್ಣುಗಳನ್ನು ದಾನ ಮಾಡಲು ಕುಟುಂಬ ನಿರ್ಧರಿಸಿದೆ.
46 ವರ್ಷದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಬೆಳಗ್ಗೆ 12 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರು ಪತ್ನಿ ಅಶ್ವಿನಿ ಮತ್ತು ಇಬ್ಬರು ಪುತ್ರಿಯರು, ಖ್ಯಾತ ನಟ-ಸಹೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಅಪಾರ ಬಂಧು-ಬಳಗ, ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ಅವರ ಅಭಿಮಾನಿಗಳು ತೀವ್ರ ದುಃಖಸಾಗರದಲ್ಲಿ ಮುಳುಗಿದ್ದಾರೆ. ನೇತ್ರದಾನದ ಮೂಲಕ ತಂದೆ ಡಾ. ರಾಜ್‌ಕುಮಾರ್ ಅವರ ಹಾದಿಯಲ್ಲೇ ಅಪ್ಪು ಸಾಗಿದ್ದಾರೆ.
Comments are closed.