ಕರಾವಳಿ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿ ದರ್ಶನ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Pinterest LinkedIn Tumblr

ಕುಂದಾಪುರ: ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಶುಕ್ರವಾರ ಭೇಟಿ‌ ನೀಡಿದರು.

ದ.ಕ ಹಾಗೂ ಉಡುಪಿ ಜಿಲ್ಲೆ ಪ್ರವಾಸದಲ್ಲಿರುವ ರಾಜ್ಯಪಾಲರು ಬೆಳಿಗ್ಗೆ ಉಡುಪಿಯಿಂದ ಕುಂದಾಪುರ ಮಾರ್ಗವಾಗಿ ಕೊಲ್ಲೂರು ದೇವಳಕ್ಕೆ ಆಗಮಿಸಿ ವಿಶೇಷ ಪೂಜೆ‌ ಸಲ್ಲಿಸಿದರು. ಝಡ್ ಪ್ಲಸ್ ಸಹಿತ ವಿಶೇಷ ಭದ್ರತೆ ಏರ್ಪಡಿಸಲಾಗಿತ್ತು.

ಬೈಂದೂರು ಶಾಸಕ‌ ಬಿ.ಎಂ ಸುಕುಮಾರ ಶೆಟ್ಟಿ, ಕೊಲ್ಲೂರು ದೇವಸ್ಥಾನದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ. ಮಹೇಶ್, ಆಡಳಿತ ಮಂಡಳಿ ಸದಸ್ಯರು, ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್. ಮೊದಲಾದವರಿದ್ದರು.

Comments are closed.