ಕರಾವಳಿ

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಶಾಲಾ ವಾಹನ ಚಾಲಕ ಬಂಧನ

Pinterest LinkedIn Tumblr

ಮಂಗಳೂರು: ನಗರದ ಅತ್ತಾವರ ಸಮೀಪದ 6 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದ ಆರೋಪದಡಿ ಆರೋಪಿ ಅತ್ತಾವರ ಬಾಬುಗುಡ್ಡೆ ನಿವಾಸಿ ಶಾಲಾ ವಾಹನದ ಚಾಲಕ ಕೃಷ್ಣಪ್ಪ ಎಂಬಾತನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

ಆರೋಪಿಯು 6ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯನ್ನು ಬುಧವಾರ ಅತ್ಯಾಚಾರ ಎಸಗಿರುವುದಾಗಿ ಬಾಲಕಿಯ ಹೆತ್ತವರು ಗುರುವಾರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆಯ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Comments are closed.