ಕರಾವಳಿ

ಬಂಟ್ವಾಳದಲ್ಲಿ ವಿದ್ಯಾರ್ಥಿಗಳಿಬ್ಬರಿಗೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಕಾರು; ಇಬ್ಬರು ಗಂಭೀರ

Pinterest LinkedIn Tumblr

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ , ಬಸ್ ಇಳಿದು ಮನೆಯ ಕಡೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು ಹೆದ್ದಾರಿ ಬದಿಯಿಂದ ಕಂದಕಕ್ಕೆ ಉರುಳಿಬಿದ್ದ ಘಟನೆ ನ.6 ಸೋಮವಾರ ನಡೆದಿದ್ದು ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ವಿದ್ಯಾರ್ಥಿಗಳಾದ ಮಹಮ್ಮದ್ ಸಲೀಂ ಹಾಗೂ ಸಿಂಚನ ಗಾಯಗೊಂಡ ವಿದ್ಯಾರ್ಥಿಗಳು. ಈ ಘಟನೆಯಿಂದ ವಿದ್ಯಾರ್ಥಿ ಮಹಮ್ಮದ್ ಸಲೀಂ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಂಚನ ಎಂಬ ವಿದ್ಯಾರ್ಥಿನಿಗೂ ಗಾಯವಾಗಿದ್ದು ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಪಾತಕ್ಕೆ ಉರುಳಿದ ಕಾರನ್ನು ಕ್ರೇನ್ ಬಳಸಿ ಮೇಲಕ್ಕೆತ್ತಲಾಯಿತು. ಕಾರು ಸಂಪೂರ್ಣ ಜಖಂ ಗೊಂಡಿದ್ದು ಕಾರು ಚಾಲಕ ಹಾಗೂ ಸಹ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

Comments are closed.