ಕರಾವಳಿ

ಮಂಗಳೂರು ಮೋರ್ಗನ್ಸ್ ಗೇಟ್ ಬಳಿ ಮಕ್ಕಳ ಸಹಿತ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Pinterest LinkedIn Tumblr

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿ ಡಿ.8 ಬುಧವಾರ ಬೆಳಕಿಗೆ ಬಂದಿದೆ.

ನಾಗೇಶ ಶೇರಿಗುಪ್ಪಿ(30), ವಿಜಯಲಕ್ಷ್ಮಿ ( 26), ಸಪ್ನಾ (8) ಸಮರ್ಥ್ (4 ) ಆತ್ಮಹತ್ಯೆಗೆ ಶರಣಾದವರು.

ಮೂಲತಃ ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದವವರಾಗಿರುವ ಇವರು ಮಂಗಳೂರಿನಲ್ಲಿ ನೆಲೆಸಿದ್ದು ಇಲ್ಲಿಯೇ ಕೆಲಸ ಮಾಡುತ್ತಿದ್ದರು. ನಾಗೇಶ್ ಡ್ರೈವರ್ ಆಗಿದ್ದು ವಿಜಯಲಕ್ಷ್ಮಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

ನಾಗೇಶ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದರೆ, ವಿಜಯಲಕ್ಷ್ಮೀ ಮತ್ತು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಂಗಳೂರು ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.‌ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Comments are closed.