ಚೆನ್ನೈ: ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17 ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಹತ್ತಿರ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾದ ಬಗ್ಗೆ ಮಾಧ್ಯಮಗಳಲ್ಲಿ ಪ್ರಾಥಮಿಕ ವರದಿಯಾಗಿದೆ.
ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು(DSC) ಕಡೆಗೆ ಹೊರಟಿತ್ತು.
ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹೆಲಿಕಾಪ್ಟರ್ ಹೊತ್ತಿ ಉರಿದಿದೆ.
ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿಯಲ್ಲಿದೆ.
ಸೇನಾ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್, ಅವರ ಸಿಬಂದಿಗಳು ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಬಿಪಿನ್ ರಾವತ್ ಸೇರಿದಂತೆ ಮೂವರನ್ನು ರಕ್ಷಿಸಲಾಗಿದ್ದು, ಐದಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದೆ. ದುರಂತದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದನ್ನು ಇನ್ನಷ್ಟೇ ನಿಖರವಾಗಿ ತಿಳಿದುಬರಬೇಕಾಗಿದೆ.
Comments are closed.