ಚಂಡೀಗಢ: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಲಿವ್ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಅಪ್ರಾಪ್ತ ಜೋಡಿ ಸಲ್ಲಿಸಿದ ಭದ್ರತಾ ಅರ್ಜಿಯ ತೀರ್ಪು ನೀಡಿದೆ.
ಇಬ್ಬರು ವ್ಯಕ್ತಿಗಳ ನಡುವೆ ಕೆಲವು ದಿನಗಳ ಕಾಲ ಸಹಮತದಿಂದ ಒಟ್ಟಿಗೆ ವಾಸಿಸುವ ಸಂಬಂಧವನ್ನು ಕಾನೂನುಬದ್ಧ ಸಂಬಂಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
(ಸಾಂದರ್ಭಿಕ ಚಿತ್ರ)
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿ ಮನೋಜ್ ಬಜಾಜ್ ಅವರ ವಿಭಾಗೀಯ ಪೀಠವು ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ ಈ ತೀರ್ಪು ನೀಡಿತು.
ವಿನಾಕಾರಣ ಅರ್ಜಿ ಸಲ್ಲಿಸಲಾಗಿದೆ ಎಂದು ಉಲ್ಲೇಖಿಸಿ, ಅರ್ಜಿದಾರರ ವಿರುದ್ಧ 25,000 ರೂ. ದಂಡ ಸಹ ವಿಧಿಸಲಾಗಿದೆ.
18 ವರ್ಷದ ಯುವತಿ ಮತ್ತು 20 ವರ್ಷದ ಯುವಕ ಕಳೆದ ತಿಂಗಳು ನವೆಂಬರ್ 24, 2021 ರಿಂದ ಹೋಟೆಲ್‌ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಹುಡುಗಿಯ ಕುಟುಂಬದವರು ಪದೇ ಪದೆ ಬೆದರಿಕೆಗಳನ್ನು ಒಡ್ಡುತ್ತಿದ್ದರು. ಈ ಹಿನ್ನೆಲೆ ನ್ಯಾಯಲಯದ ಮೊರೆ ಹೊದ ಜೋಡಿ, ಪರಸ್ಪರ ಪ್ರೀತಿಸುತ್ತಿರುವುದಾಗಿ ಹೇಳಿಕೊಂಡು ಮದುವೆಯಾಗುವ ಇಚ್ಛೆಯನ್ನು ವ್ಯಕ್ತಪಡಿಸಿ ಅರ್ಜಿ ಸಲ್ಲಿಸಿದ್ದರು.ಹುಡುಗಿಯ ಮನೆಯವರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿ, ಕ್ರಿಮಿನಲ್ ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.
ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ಅಪ್ರಾಪ್ತ ವಯಸ್ಸಿನಲ್ಲಿ ಇಂತಹ ಭಾವನೆಗಳು ಮೂಡುವುದು ಸರ್ವೇ ಸಾಮಾನ್ಯ. ಈ ರೀತಿಯ ಘಟನೆಗಳಲ್ಲಿ ಭದ್ರತೆ ನಿಯೋಜಿಸಲಾಗುವುದಿಲ್ಲ ಎಂದು ತೀರ್ಪು ನೀಡಿದೆ.
Comments are closed.