ಕರಾವಳಿ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ತಲೆಮರೆಸಿಕೊಂಡಿದ್ದ ಆರೋಪಿ ವಕೀಲ ರಾಜೇಶ್ ಕೋರ್ಟ್‌ಗೆ ಶರಣು

Pinterest LinkedIn Tumblr

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕರಾಗಿದ್ದ ಕೆ.ಎಸ್.ಎನ್ ರಾಜೇಶ್ ಡಿ.20 ರಂದು ಸೋಮವಾರ 3 ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜೇಶ್ ಪತ್ತೆಗಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಕೂಡ ಹೊರಡಿಸಿ ದೇಶ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಿಸಿದ್ದರು. ಹಾಗೆಯೇ ಆರೋಪಿ ಪತ್ತೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ವಿದ್ಯಾರ್ಥಿನಿ ಅ.18 ರಂದು ಪೊಲೀಸರಿಗೆ ದೂರು ನೀಡಿದ್ದುಆರೋಪಿಯನ್ನು ಬಂಧಿಸುವುದು ಪೊಲೀಸರಿಂದ ಇದುವರೆಗೂ ಸಾಧ್ಯವಾಗಿರಲಿಲ್ಲ. ಎರಡು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಈತನಿಗೆ ನಿರೀಕ್ಷಣಾ ಜಾಮೀನು ದೊರೆತಿರಲಿಲ್ಲ.

ವಿದ್ಯಾರ್ಥಿನಿ ಕಳೆದ ಆ.8 ರಂದು ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದರು. ಆಗ ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದ. ಸೆ.25 ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

 

Comments are closed.