ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೇಶ್ ಭಟ್ ಅವರಿಗೆ ನ್ಯಾಯಾಲಯವು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ನಗರದ ಮೂರನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಆರೋಪಿಯನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರಿದ್ದರು. ಆದರೆ ನ್ಯಾಯಮೂರ್ತಿ ಅಶ್ವಿನಿ ಕೋರೆ ಆರೋಪಿಯನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ನೀಡಿದ್ದಾರೆ.
ಆರೋಪಿ ರಾಜೇಶ್ ಪರ ವಕೀಲ ಅಶ್ಫಾಕ್ ಬಜ್ಪೆ ವಾದ ಮಂಡಿಸಿದ್ದಾರೆ.
ಕಾನೂನು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ರಾಜೇಶ್ ಡಿಸೆಂಬರ್ 20 ರಂದು ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.
ಅ. 18ರಂದು ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿ ರಾಜೇಶ್ ಭಟ್ ಬಂಧನದಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿದ್ದ. ರಾಜೇಶ್ ಪರ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆಸಲಾಗಿತ್ತು. ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು.
Comments are closed.