ಕರಾವಳಿ

ಉಡುಪಿ ಪರ್ಯಾಯ ಮಹೋತ್ಸವ ಆಮಂತ್ರಣ ಪತ್ರಿಕೆ ನೀಡಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ

Pinterest LinkedIn Tumblr

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಧಾನಸೌಧದಲ್ಲಿ ನೀಡಲಾಯಿತು.

ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಶಾಸಕ ಕೆ.ರಘುಪತಿ ಭಟ್‌ ಅವರು ಪರ್ಯಾಯೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಯವರನ್ನು ಆಹ್ವಾನಿಸಿದರು.

ಸಮಿತಿಯ ನಿಯೋಗದೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು ಪರ್ಯಾಯ ಉತ್ಸವ ಸುಗಮವಾಗಿ ನಡೆಯುವ ಸಲುವಾಗಿ ಅಗತ್ಯ ಅನುಕೂಲ ಕಲ್ಪಿಸಲು ಜಿಲ್ಲಾಧಿಕಾರಿಯವರಿಗೆ ತಿಳಿಸುವುದಾಗಿ ಹೇಳಿದರು.

ಈ ವೇಳೆ ಸಚಿವರಾದ ಗೋವಿಂದ ಎಂ. ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್‌ ಸದಸ್ಯರಾದ ರವಿಕುಮಾರ್‌, ಭಾರತಿ ಶೆಟ್ಟಿ, ಸಮಿತಿ ಪದಾಧಿಕಾರಿಗಳಾದ ಶ್ರೀಪತಿ ಭಟ್‌ ಉಚ್ಚಿಲ, ವಿಷ್ಣುಪ್ರಸಾದ್‌ ಪಾಡಿಗಾರ್‌, ಜಯಪ್ರಕಾಶ ಕೆದ್ಲಾಯ ಮೊದಲಾದವರು ಉಪಸ್ಥಿತರಿದ್ದರು.

 

Comments are closed.