ಕರಾವಳಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಮಂಗಳೂರಿನಲ್ಲಿ ಬಸ್ ಚಾಲಕ ಅಂದರ್..!

Pinterest LinkedIn Tumblr

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಬಸ್ ಚಾಲಕನೊಬ್ಬ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯು ಬಾಗಲಕೋಟೆ ಮೂಲದ ದಯಾನಂದ(32) ಎಂದು ತಿಳಿದು ಬಂದಿದೆ.

ಮಂಗಳೂರು ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ದಯಾನಂದ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ನಿರ್ಜನ‌ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಈ ಬಗ್ಗೆ ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಕ್ಸೊ ಪ್ರಕರಣದಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Comments are closed.