ಬೆಂಗಳೂರು: ನಾನು ಗಳಿಸಿರುವ ಆಸ್ತಿ ಎಲ್ಲವೂ ಕಾನೂನು ಬದ್ದವಾಗಿದ್ದು, ನನ್ನ ವಿರುದ್ಧ ಆರೋಪ ಮಾಡಿ ನನ್ನ ಚಾರಿತ್ರ್ಯ ಹರಣಕ್ಕೆ ಯತ್ನಿಸುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಹೇಳಿದ್ದಾರೆ.
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ಮೇಲೆ ಬಂದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ಬಳಿಕ ಅವರು ಮೊದಲ ಬಾರಿಗೆ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಕ್ರಷರ್ ಪ್ರಕರಣದಲ್ಲಿ ಲಂಚ ಸ್ವೀಕರಿಸಿದ ಆರೋಪ ಪ್ರಕರಣ ಸುದ್ದಿಯಾದ ಬೆನ್ನಲ್ಲೇ ನ್ಯಾಯಾಲಯದಿಂದ ತನ್ನ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ತಾತ್ಕಾಲಿಕ ತಡೆಯಾಜ್ಞೆ ತಂದಿದ್ದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರು ಇದೀಗ ಆರೋಪಗಳ ಸಂಬಂಧ ಸ್ಪಷ್ಟನೆ ನೀಡಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
”ನಾನು ಗಳಿಸಿರುವ ಆಸ್ತಿ ಪಿತ್ರಾಜಿತ ಮತ್ತು ಸ್ವಯಾರ್ಜಿತ. ಯಾವುದೇ ಆಸ್ತಿಯನ್ನು ಬೇನಾಮಿಯಾಗಿ ಗಳಿಸಿಲ್ಲ. ನನ್ನ ಎಲ್ಲಾ ಆಸ್ತಿಗಳಿಗೆ ಸಂಬಂಧಿಸಿದಂತೆ ಪ್ರತಿವರ್ಷ ಆದಾಯ ತೆರಿಗೆಯನ್ನು ಪಾವತಿ ಮಾಡಿದ್ದೇನೆ. ಎಲ್ಲಾ ವಿವರಗಳನ್ನು ಆದಾಯ ತೆರಿಗೆ ಇಲಾಖೆಗೆ ನೀಡಿದ್ದೇನೆ. ನನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನ ಹರಣ ಸುದ್ದಿ ಪ್ರಕಟಿಸಲಾಗುತ್ತಿದೆ. ಇನ್ನು ನನ್ನ ತೇಜೋವಧೆ ಮಾಡುತ್ತಿರುವ ಮಾಧ್ಯಮಗಳಿಗೆ ನ್ಯಾಯವಾದಿಗಳ ಮೂಲಕ ನೋಟಿಸ್ ಜಾರಿ ಮಾಡಿದ್ದೇನೆ. ಇನ್ನೂ ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿ ಮಾನಹಾನಿಕರ ಸುದ್ದಿ ಪ್ರಕಟಿಸುತ್ತಿರುವ ಸಂಬಂಧ ಮೂರು ಕೋಟಿ ರೂ.ಗೆ ಮಾನಹಾನಿ ಪ್ರಕರಣವನ್ನು ದಾಖಲಿಸಿದ್ದೇನೆ. ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಕ್ರಿಮಿನಲ್ ಮೊಕದ್ದಮೆ ಮೂಲಕ ನ್ಯಾಯಾಲಯವನ್ನ ಕೋರಿದ್ದೇನೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಈಗಾಗಾಲೇ ನನ್ನ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಸಿವಿಲ್ ಹಾಗೂ ಕ್ರಿಮಿನಲ್ ಮಾನಹಾನಿಕರ ಕೇಸು ದಾಖಲಿಸಿದ್ದೇನೆ. ನಾನು ದಾಖಲಿಸಿರುವ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೂ ನಾನು ಮಾತನಾಡುವುದು ಸೂಕ್ತವಲ್ಲ. ಇನ್ನು ನನ್ನ ವಹಿಸಿಕೊಂಡು ಯಾರೂ ಕೆಟ್ಟ ಪದಗಳನ್ನು ಬಳಸಿ ಸಾಮಾಜಿಕ ಜಾಲ ತಾಣದಲ್ಲಿ ಕೆಟ್ಟ ಪದ ಬಳಸದಂತೆ ತಿಳಿಸಿದ್ದಾರೆ.
Comments are closed.