ಕರ್ನಾಟಕ

ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಹೈಕೋರ್ಟ್ ಮೊರೆ ಹೋದ ವಿದ್ಯಾರ್ಥಿನಿ

Pinterest LinkedIn Tumblr

ಉಡುಪಿ: ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಮುಸ್ಲಿಂ ವಿದ್ಯಾರ್ಥಿನಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಉಡುಪಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಕರ್ನಾಟಕದ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಉಡುಪಿ ಸರಕಾರಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶ ನಿರಾಕರಣೆ ಹಿನ್ನಲೆಯಲ್ಲಿ ವಿದ್ಯಾರ್ಥಿನಿ ಈ ನಿರ್ಧಾರಕ್ಕೆ ಬಂದಿದ್ದಾಳೆ.

ಹಿಜಾಬ್ ಧರಿಸುವುದನ್ನು ಸಂವಿಧಾನದ ಆರ್ಟಿಕಲ್ 14 ಮತ್ತು 25ರ ಅಡಿಯಲ್ಲಿ ಮೂಲಭೂತ ಹಕ್ಕು ಎಂದು ಘೋಷಿಸಲು ಮನವಿ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಕಾಲೇಜು ಆಡಳಿತ ಮಂಡಳಿಯ ಹಸ್ತಕ್ಷೇಪ ಇಲ್ಲದೆ ತರಗತಿಗೆ ಭಾಗವಹಿಸಲು ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ.

ಹಿಜಾಬ್ ಧರಿಸುವುದು ನಮ್ಮ ಧಾರ್ಮಿಕ ನಂಬಿಕೆಯ ಭಾಗವಾಗಿದೆ. ಶತಾಭೀಷ್ ಶಿವಣ್ಣ, ಅರ್ನವ್ ಎ ಬಾಗಲವಾಡಿ ಮತ್ತು ಅಭಿಷೇಕ್ ಜನಾರ್ದನ್ ಪ್ರಕರಣದ ಪರವಾಗಿ ವಾದ ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Comments are closed.