ಮುಂಬೈ: ಖ್ಯಾತ ಗಾಯಕಿ, ಗಾನ ಕೋಗಿಲೆ, ಭಾರತ ರತ್ನ ಲತಾ ಮಂಗೇಶ್ಕರ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಚಿಕಿತ್ಸೆ ಫಲಕಾರಿಯಾಗಿದೆ ಭಾನುವಾರ ನಿಧನರಾದರು.
ಜನವರಿ 8 ರಂದು ಕೋವಿಡ್ -19 ಪಾಸಿಟಿವ್ ಹಿನ್ನೆಲೆ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದೆರಡು ವಾರಗಳಿಂದ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆರೋಗ್ಯ ಸ್ಥಿತಿಯು ಹದಗೆಟ್ಟಿತು.
ಲತಾ ಮಂಗೇಶ್ಕರ್ ಅವರು ಹಿನ್ನೆಲೆ ಗಾಯನದ ಏಳು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ, ‘ಆಯ್ ಮೇರೆ ವತನ್ ಕೆ ಲೋಗೋ’, ‘ಲಗ್ ಜಾ ಗಲೇ’, ‘ಯೇ ಕಹಾನ್ ಆಗೇ ಹೈ ಹಮ್’ ಮತ್ತು ‘ಪ್ಯಾರ್ ಕಿಯಾ ತೊ ಡರ್ನಾ ಕ್ಯಾ’ ಮೊದಲಾದ ಹಾಡುಗಳು ಇಂದಿಗೂ ಖ್ಯಾತವಾಗಿದೆ. ಅವರ ಪ್ರತಿಭೆಗಾಗಿ ಭಾರತರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಅಸಂಖ್ಯಾತ ಪ್ರಶಸ್ತಿಗಳು ಲಭಿಸಿದೆ.
Comments are closed.