ಕುಂದಾಪುರ: ತಾಲೂಕಿನ ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೂ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಸೋಮವಾರ ನಡೆಯಿತು.
ಮೂವರು ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದರು. ಗೇಟಿನ ಬಳಿ ಅವರನ್ನು ತಡೆದು ಸರಕಾರದ ಆದೇಶದ ಬಗ್ಗೆ ಪ್ರಭಾರ ಪ್ರಾಂಶುಪಾಲರು ತಿಳಿಸಿದರು. ಈ ವೇಳೆಗಾಗಾಲೇ ಕಾಲೇಜಿನ ಮತ್ತೊಂದಷ್ಟು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟಿಸಿದರು. ಈ ವೇಳೆ ಕೆಲ ಕಾಲ ಗೊಂದಲದ ಸ್ಥಿತಿ ನಿರ್ಮಾಣವಾಯಿತು.
ತದನಂತರ ಹಿಜಾಬ್ ಧರಿಸಿದ ಮೂವರು ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸದೆ ಮನೆಗೆ ತೆರಳಿದ್ದು ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಶಾಲು ತೆಗೆದಿಟ್ಟು ತರಗತಿಗೆ ತೆರಳಿದರು.
Comments are closed.