ಬೆಂಗಳೂರು: ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಹೆಚ್ಚಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಪ್ರೌಢಶಾಲೆ- ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ.
ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಈ ಬಗ್ಗೆ ಮಾಹಿತಿ ನೀಡಿದ್ದು, ಹೈಕೋರ್ಟ್ ನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಇಡೀ ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ರಜೆ ಘೋಷಣೆ ಮಾಡಲಾಗಿದೆ ಎಂದರು.
Comments are closed.