ಮಂಗಳೂರು: ಅಪರೂಪದ ಹಾರುವ ವಿಶೇಷ ಮೀನುಗಳೆರಡು ಮಂಗಳೂರಿನ ಮೀನುಗಾರರ ಬಲೆಗೆ ಬಿದ್ದಿದ್ದು, ಇದನ್ನು ಆಂಗ್ಲ ಭಾಷೆಯಲ್ಲಿ ಪ್ಲೈಯಿಂಗ್ ಫಿಶ್ ಹಾಗೂ ತುಳುವಲ್ಲಿ ಪಕ್ಕಿಮೀನ್ ಎಂದು ಕರೆಯುತ್ತಾರೆ.
ಈ ಕುರಿತು ಮೀನುಗಾರ ಲೋಕೇಶ್ ಬೆಂಗ್ರೆ ಮಾಹಿತಿ ನೀಡಿದ್ದು, ಎರಡು ದಿನ ಹಿಂದೆ ದಕ್ಕೆಗೆ ಬಂದಿರುವ ಮೀನಿನ ರಾಶಿಯಲ್ಲಿ ಎರಡು ಹಾರುವ ಮೀನುಗಳು ಸಿಕ್ಕಿದ್ದು, ಇದು 15ರಿಂದ 45 ಸೆಂ.ಮೀ.ವರೆಗೆ ಉದ್ದವಾಗಿದೆ. ಇತರ ಮೀನುಗಳಿಗೆ ಹೋಲಿಸಿದರೆ ಹಾರುವ ಮೀನುಗಳು ಹೆಚ್ಚು ರುಚಿಕರವಾಗಿರುತ್ತವೆ. ಆದರೆ ಅದನ್ನು ಹಿಡಿಯುವ ಕ್ರಮ ಈ ಭಾಗದಲ್ಲಿ ಕಡಿಮೆ ಎಂದರು.
ಹಾರುವ ಮೀನು ಹೆಚ್ಚಾಗಿ ಆಳಸಮುದ್ರದಲ್ಲಿರುತ್ತವೆ. ಇವುಗಳಿಗೆ ಹಕ್ಕಿಯಂತೆಯೇ ರೆಕ್ಕೆಗಳಿರುತ್ತವೆ ಎನ್ನಲಾಗಿದೆ.
Comments are closed.