ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ವಕೀಲ ಕೆ.ಬಾಲನ್ ಅವರು ಚೇತನ್ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
Comments are closed.