ಬೆಂಗಳೂರು: ಉಕ್ರೇನ್ ನ ಖಾರ್ಕಿವ್ ನಲ್ಲಿ ನಡೆದ ಶೆಲ್ ದಾಳಿಯಲ್ಲಿ ಮೃತಪಟ್ಟ ನವೀನ್ ತಂದೆಯವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.
ಶಂಕರ್ ಗೌಡ ಅವರ ಇಬ್ಬರು ಮಕ್ಕಳಲ್ಲಿ ಒಬ್ಬ ಮಗ ಬೆಂಗಳೂರಿನಲ್ಲಿ ಪಿ.ಎಸ್.ಡಿ ಓದುತ್ತಿದ್ದಾರೆ. ನವೀನ್ ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿದ್ದರು. ನಿನ್ನೆ ಬೆಳಿಗ್ಗೆ ತಿಂಡಿ ತರಲು ಹೋದಾಗ ನಡೆದ ಶೆಲ್ ದಾಳಿಯಲ್ಲಿ ನವೀನ್ ಬಲಿಯಾಗಿದ್ದಾರೆ.
ಸಿಎಂ ಬೊಮ್ಮಾಯಿ ಸಾಂತ್ವನ: ಉಕ್ರೇನ್ ನಲ್ಲಿ ನಡೆದ ಶೆಲ್ ದಾಳಿಯಲ್ಲಿ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರು ಮೃತ ವಿದ್ಯಾರ್ಥಿ ತಂದೆ ಶೇಖರಗೌಡ ಅವರಿಗೆ ಸಾಂತ್ವಾನ ಹೇಳಿದರು.
ದೂರವಾಣಿಯಲ್ಲಿ ಮಾತನಾಡಿ ಸಾವನ್ನಪ್ಪಿದ ನವೀನ್ ಬಗ್ಗೆ ಮಾಹಿತಿ ಪಡೆದ ಸಿಎಂ, ಇದು ನಿಜಕ್ಕೂ ದೊಡ್ಡ ದುರಂತ. ನೀವು ಧೈರ್ಯದಿಂದಿರಿ. ನವೀನ್ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಪ್ರಯತ್ನ ನಡೆದಿದೆ. ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಾಂತ್ವಾನ ಹೇಳಿದರು
ಮಗನ ಬಗ್ಗೆ ದುಃಖದಿಂದ ಮಾತನಾಡಿದ ಶೇಖರಗೌಡ, ಘಟನೆ ನಡೆದ ಮುಂಜಾನೆ ತಮ್ಮ ಮಗ ದೂರವಾಣಿ ಕರೆ ಮಾಡಿದ್ದ ಪ್ರತಿ ದಿನ ಎರಡು ಮೂರು ಬಾರಿ ದೂರವಾಣಿ ಮೂಲಕ ಮಾತಾಡುತ್ತಿದ್ದ ಎಂದು ವಿವರಿಸಿದರು.
ರಾಹುಲ್ ಗಾಂಧಿ ಸಂತಾಪ
ರಷ್ಯಾ-ಉಕ್ರೇನ್ ಯುದ್ಧದಲ್ಲಿ ಬಾಂಬ್ ದಾಳಿಗೆ ತುತ್ತಾಗಿ ಮೃತರಾಗಿರುವ ಕರ್ನಾಟಕದ ನವೀನ್ ಕುಟುಂಬಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕರೆ ಮಾಡಿ ಸಾಂತ್ವನ ಹೇಳಿದರು. ನವೀನ್ ಕುಟುಂಬಕ್ಕೆ ಧೈರ್ಯ ಹೇಳಿದ ಮಾಜಿ ಮುಖ್ಯಮಂತ್ರಿ ಮೃತದೇಹ ತರಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.

Comments are closed.