ಕರಾವಳಿ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ಬಂಧನ

Pinterest LinkedIn Tumblr

ಮಂಗಳೂರು: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.

ದೇರಳಕಟ್ಟೆ ಸಮೀಪದ ಮಾಡೂರು ಗ್ರಾಮದ ಪವನ್ ಶೆಟ್ಟಿ (33) ಎಂಬಾತನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.‌

ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ‌ಫೆ.22ರಂದು ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳವಾರ ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Comments are closed.