ಕರಾವಳಿ

ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿ ದೀಪದ ಅವ್ಯವಸ್ಥೆ; ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

Pinterest LinkedIn Tumblr

ಕುಂದಾಪುರ: ಇಲ್ಲಿನ ನೆಹರೂ ಮೈದಾನದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ ವೇಳೆಗೆ ಬಲ ಭಾಗದ ಸರ್ವೀಸ್ ರಸ್ತೆಯಿಂದ ಎಡ ಭಾಗದ ಸರ್ವೀಸ್ ರಸ್ತೆಗೆ ಬರಲೆಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ದಾಟುತ್ತಿದ್ದ ಶಿವಪ್ಪ (32) ಎನ್ನುವವರಿಗೆ ಹೆದ್ದಾರಿಯಲ್ಲಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿ ವಲಸೆ ಕೂಲಿ ಕಾರ್ಮಿಕನಾಗಿದ್ದು, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುರೇಬಾನ ಗ್ರಾಮದವರೆನ್ನಲಾಗಿದೆ.

ಹೆದ್ದಾರಿ ದೀಪವಿಲ್ಲದಿದ್ದಕ್ಕೆ ಅವಘಡ..?
ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿ ದೀಪ ಅಳವಡಿಸದೆ ಇರುವುದು ಹಾಗೂ ನಗರ ಪ್ರವೇಶಕ್ಕೆ ಅವಕಾಶ ನೀಡದೆ ಇರುವುದೇ ದುರಂತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.