ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ.
ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1,000 ರೂ.ಗಳು, ಬಿಸಿಯೂಟ ತಯಾರಕರಿಗೂ ತಲಾ 1,000 ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಗೌರವಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1,000 ರೂಪಾಯಿಯಿಂದ 1,500 ರೂ.ಗಳನ್ನು ಹೆಚ್ಚಳ ಮಾಡಲಾಗುವುದು. ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ 30,000 ಮತ್ತು 50,000 ಇಡಿಗಂಟು ಕೊಡುವುದಾಗಿ ಹೇಳಿದ್ದಾರೆ.
ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2,000 ಪ್ರೋತ್ಸಾಹ ಗೌರವಧನ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
Comments are closed.