ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ(28) ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳ ವಿರುದ್ಧ 1967 ರ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(ಯುಎಪಿಎ)ಯಡಿಯಲ್ಲಿ ಕೆಲವು ಸೆಕ್ಷನ್‌ಗಳನ್ನು ಹಾಕಿದ್ದಾರೆ.
ಅಲ್ಲದೆ ಕಳೆದ 11 ದಿನಗಳಿಂದ ಪೊಲೀಸ್ ವಶದದಲ್ಲಿದ್ದ ಆರೋಪಿಗಳನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮುಖ ಆರೋಪಿ ಬುದ್ಧನಗರ ನಿವಾಸಿ ಮಹಮ್ಮದ್ ಖಾಸಿಫ್ (30) ಸೇರಿದಂತೆ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಯದ್ ನದೀಮ್, ರಿಹಾನ್ ಷರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫ್ನಾನ್, ನಿಹಾನ್, ಫರಾಜ್ ಪಾಷಾ, ಅಬ್ದುಲ್ ಖಾದರ್ ಜಿಲಾನ್, ಅಬ್ದುಲ್ ರೋಷನ್ ಮತ್ತು ಜಾಫರ್ ಸಾದಿಕ್ ಪ್ರಕರಣದ ಇತರ ಆರೋಪಿಗಳು.
ಫೆಬ್ರವರಿ 20 ರಂದು ಎನ್‌ಟಿ ರಸ್ತೆಯ ಕಾಮತ್ ಪೆಟ್ರೋಲ್ ಪಂಪ್ ಬಳಿ ಭಜರಂಗದಳ ಕಾರ್ಯಕರ್ತ ಹರ್ಷ ಅವರನ್ನು ಹತ್ಯೆ ಮಾಡಲಾಗಿತ್ತು. ನಂತರದ ಬೆಳವಣಿಗೆಯಲ್ಲಿ ಮುಂಜಾಗೃತ ಕ್ರಮವಾಗಿ ನಗರದಾದ್ಯಂತ ಒಂದು ವಾರಗಳ ಕಾಲ ನಿಷೇಧಾಜ್ಞೆ ಹೇರಲಾಗಿತ್ತು.
Comments are closed.