ಬೆಂಗಳೂರು: ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಈಗಿರುವ ಆರ್ಥಿಕ ಮಿತಿಯನ್ನು 32 ಸಾವಿರ ರೂ.ಗಳಿಂದ 1.20 ಲಕ್ಷ ರೂ. ಗಳಿಗೆ ಹಾಗೂ ನಗರ ಪ್ರದೇಶದಲ್ಲಿ 87 ಸಾವಿರ ರೂಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ನ ರಮೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೋಲಾರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮಾಡಿರುವ ತಪ್ಪಿನಿಂದ ಬಡವರಿಗೆ ಆದಾಯ ಪ್ರಮಾಣ ಪತ್ರ ಪಡೆಯಲು ಸಮಸ್ಯೆಯಾಗಿದೆ.
ರಾಜ್ಯ ಸರ್ಕಾರ ಇದುವರೆಗೂ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆರ್ಥಿಕ ಮಾನದಂಡವನ್ನು ಗ್ರಾಮೀಣ ಪ್ರದೇಶದಲ್ಲಿ 32 ಸಾವಿರ ರೂ.ಗಳಿಂದ 1.20 ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಅದೇ ರೀತಿ ನಗರ ಪ್ರದೇಶದಲ್ಲಿಯೂ 87 ಸಾವಿರ ರೂ. ಗಳಿಂದ 3 ಲಕ್ಷ ರೂ.ಗಳಿಗೆ ಆದಾಯದ ಮಿತಿ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
Comments are closed.