ಕುಂದಾಪುರ: ಒಣಹುಲ್ಲು ಸಾಗಿಸುತ್ತಿದ್ದ ವಾಹನಕ್ಕೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಬೆಂಕಿ ಹತ್ತಿಕೊಂಡ ಘಟನೆ ಶನಿವಾರ ಕುಂದಾಪುರ ತಾಲೂಕಿನ ಕೊರ್ಗಿ ಗಿರಿಜಾ ಚಂದ್ರಶೇಖರ್ ಹೆಗ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎದುರು ಸಂಭವಿಸಿದೆ.
ಶಿಕಾರಿಪುರದಿಂದ ಕೊರ್ಗಿಗೆ ಜಾನುವಾರುಗಳ ಮೇವಿಗಾಗಿ ಬೈಹುಲ್ಲು ಸಾಗಿಸುತ್ತಿದ್ದ ಸಂದರ್ಭದಲ್ಲಿಯೇ ಶಾಲಾ ಸಮೀಪದಲ್ಲಿ ಬರುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದಿದೆ.
ಪರಿಣಾಮ ವಾಹನದಲ್ಲಿದ್ದ ಸುಮಾರು 30 ಸಾವಿರಕ್ಕೂ ಅಧಿಕ ಮೊತ್ತದ ಹುಲ್ಲಿಗೆ ಹಾನಿ ಸಂಭವಿಸಿದೆ. ಚಾಲಕನ ಸಮಯ ಪ್ರಜ್ಞೆ ಹಾಗೂ ಸ್ಥಳೀಯರ ಕಾರ್ಯಾಚರಣೆಯಿಂದ ಸಂಭವನೀಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
Comments are closed.