ವಿಟ್ಲ: ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾದ ಘಟನೆ ವಿಟ್ಲಪಡ್ನೂರು ಗ್ರಾಮದ ಕೋಡಪದವು ಸರವು ಎಂಬಲ್ಲಿ ಭಾನುವಾರ ನಡೆದಿದೆ.
ಸಿಟ್ರೀನ್ ಪಾಯಸ್ ಅವರ ಕಾರು ಸಂಪೂರ್ಣವಾಗಿ ಸುಟ್ಟು ಕರಲಾಗಿದೆ ಎಂದು ವರದಿಯಾಗಿದೆ.
ಬೋಳಂತೂರು ಕಡೆಯಿಂದ ಕೋಡಪದವು ಮೂಲಕ ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಕೇಳಿಸಿದ್ದು, ದಿಢೀರನೆ ಕಾರನ್ನು ರಸ್ತೆ ಬದಿಗೆ ತಂದು ನಿಲ್ಲಿಸಿದ್ದು ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಅವರು ಕಾರಿನಿಂದ ಹೊರಗಡೆ ಬಂದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ.
Comments are closed.