ಸುಬ್ರಹ್ಮಣ್ಯ: ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದರಿಂದ ಯುವಕ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದಲ್ಲಿ ಭಾನುವಾರ ನಡೆದಿದೆ.
ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಗ್ರಾಮದ ಕೋನಡ್ಕ ನಿವಾಸಿ ಗುರುಪ್ರಸಾದ್ (21) ಕಾಡಾನೆ ದಾಳಿಯಿಂದ ಗಾಯಗೊಂಡ ಯುವಕ. ಗಾಯಾಳು ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಬೆಳಗ್ಗೆ ಗುರುಪ್ರಸಾದ್ ಕೊಲ್ಲಮೊಗ್ರುದ ಇಡ್ನೂರು ಹಾಲು ಡೈರಿಗೆ ಹಾಲು ಹಾಕಲು ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಕಾಡಾನೆ ಗುರುಪ್ರಸಾದ್ ಮೇಲೆ ದಾಳಿ ಮಾಡಿದ್ದನ್ನು ವ್ಯಕ್ತಿಯೊಬ್ಬರು ನೋಡಿ ಇತರರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕಾಡಾನೆಯನ್ನು ಓಡಿಸಿ, ಯುವಕನನ್ನು ಉಪಚರಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
Comments are closed.