ಮಂಗಳೂರು: ನಿಲ್ಲಿಸಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸುಟ್ಟು ಕರಕಲಾದ ಘಟನೆ ಶಕ್ತಿನಗರದ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಮಹಿಳೆಯೊಬ್ಬರು ಶಕ್ತಿನಗರದಲ್ಲಿ ತನ್ನ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ವಿಹಾರಕ್ಕೆ ತೆರಳಿದ್ದರು. ಮರಳಿ ಬರುವಷ್ಟರಲ್ಲಿ ಸ್ಥಳದಲ್ಲಿ ಬೆಂಕಿ ಕಾಣಿಸಿತು. ತಕ್ಷಣ ಅವರು ಸ್ಥಳೀಯರಿಗೆ ತಿಳಿಸಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ದಳದವರುಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದು ಅಷ್ಟರಲ್ಲಾಗಲೇ ಕಾರು ಭಾಗಶಃ ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.
Comments are closed.