ಕರ್ನಾಟಕ

ರಾತ್ರಿ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ; ಇಂದು ಹಲವು ಕಾರ್ಯಕ್ರಮದಲ್ಲಿ ಭಾಗಿ..!

Pinterest LinkedIn Tumblr

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು.

ಬೆಂಗಳೂರು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ರಾಜ್ಯ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.

ಇಂದು (ಶುಕ್ರವಾರ) ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ಅಮಿತ್ ಶಾ, ಲಿಂಗೈಕ್ಯ ಡಾ. ಶಿವಕುಮಾರ್ ಸ್ವಾಮೀಜಿಗಳ 115ನೇ ಜಯಂತೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಸಂಜೆ ಬೆಂಗಳೂರಿನಲ್ಲಿ ರಾಜ್ಯ ಸಹಕಾರಿ ಇಲಾಖೆ ಆಯೋಜಿಸಿರುವ ಸಮಾರಂಭದಲ್ಲಿ ಕ್ಷೀರಾಭಿವೃದ್ಧಿ ಬ್ಯಾಂಕ್ ಲಾಂಛನ ಹಾಗೂ ಯಶಸ್ವಿನಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.

Comments are closed.