ಕರ್ನಾಟಕ

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯೋತ್ಸವ

Pinterest LinkedIn Tumblr

ತುಮಕೂರು: ಇಂದು (ಏ.1ಶುಕ್ರವಾರ) ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯೋತ್ಸವದ ಹಿನ್ನೆಲೆ ಸಂಭ್ರಮ ಮನೆಮಾಡಿದೆ.

ಸಿದ್ಧಗಂಗಾ ಶ್ರೀಗಳ ಸಾಮಾಜಿಕ ಕಾರ್ಯಗಳು, ತ್ರಿವಿಧ ದಾಸೋಹ ಇಡೀ ದೇಶಕ್ಕೆ ಅನುಕರಣೀಯ, ಲಕ್ಷಾಂತರ ಭಕ್ತರು ಇಂದು ಅವರ ಜಯಂತ್ಯೋತ್ಸವದಲ್ಲಿ ಭಾಗಿಯಾಗುತ್ತಿದ್ದಾರೆ.

ಇಂದು ಶಿವಕುಮಾರ ಸ್ವಾಮಿಗಳ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಗದ್ದುಗೆಗೆ ವಿಶೇಷ ಪೂಜೆ, ಅಭಿಷೇಕ ನೆರವೇರಿಸಲಾಗಿದೆ. ಸಿದ್ದಗಂಗಾ ಶ್ರೀಗಳ ಈಗಿನ ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಗಿದೆ. ಗದ್ದುಗೆಗೆ ಪೂಜೆ ಬಳಿಕ ಶ್ರೀಗಳ ಕಂಚಿನ ಪ್ರತಿಮೆ ಮೆರವಣಿಗೆ ಮಾಡಲಾಗುತ್ತದೆ.

ಸಿದ್ಧಗಂಗಾ ಮಠದಲ್ಲಿ ಇಂದು ಬೆಳಗ್ಗೆ 11 ಗಂಟೆಯ ವೇಳೆಗೆ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗುತ್ತಿದ್ದು ವಿಶೇಷ ಭದ್ರತೆ ಕಲ್ಪಿಸಲಾಗಿದೆ. ಅಮಿತ್ ಶಾ ಅವರ ಜೊತೆ ರಾಜ್ಯದ ಮುಖ್ಯಮಂತ್ರಿ ಸಹಿತ ಬಿಜೆಪಿ ನಾಯಕರು ಭಾಗವಹಿಸುತ್ತಿದ್ದು ಭದ್ರತೆಗಾಗಿ 2 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಬೆಳಗ್ಗೆ 5 ಗಂಟೆಯಿಂದಲೇ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಮಠಕ್ಕೆ ಬರುವ ಎಲ್ಲಾ ಭಕ್ತರಿಗೆ ಬೆಳಗ್ಗೆ ತಿಂಡಿಯಿಂದ ಹಿಡಿದು ಮಧ್ಯಾಹ್ನ ಭೋಜನ, ರಾತ್ರಿಯ ಭೋಜನ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಭಕ್ತರಿಗೆ ಪ್ರಸಾದ ವಿತರಣೆ ವ್ಯವಸ್ಥೆಗೆ ಸಿದ್ಧತೆ ಆರಂಭವಾಗಿದೆ. ಬರೋಬ್ಬರಿ 20 ಎಕರೆ ಪ್ರದೇಶದಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಮಠದಲ್ಲಿ ಇಂದು ಮಧ್ಯಾಹ್ನ ಜರುಗುವ ಕಾರ್ಯಕ್ರಮದಲ್ಲಿ 300 ವಿಐಪಿಗಳಿಗೆ ಮಾತ್ರ ಅವಕಾಶವಿದೆ. ಬಸವ ಭಾರತ ಎಂಬ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ.

Comments are closed.