ಉಡುಪಿ: ಹಲಾಲ್, ಜಟ್ಕಾ ವಿವಾದ ಕೆಲವು ವ್ಯಕ್ತಿಗಳು ಹಾಗೂ ಪಕ್ಷಗಳು ಸೃಷ್ಟಿ ಮಾಡಿದ್ದು ಅವರು ಆಡುತ್ತಿರುವ ಆಟದಿಂದಾಗಿ ಕರ್ನಾಟಕದಲ್ಲಿ ಜನ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಅವರು ಭಾನುವಾರ ಕಾರ್ಕಳದ ನಿಟ್ಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಯಾರು ಯಾವುದನ್ನು ಪೂಜೆ ಮಾಡುತ್ತಾರೆ ಅದನ್ನು ಮಾಡಿಕೊಳ್ಳಬೇಕು ಅವರವರು ಅವರ ಪದ್ದತಿಯನ್ನು ಮುಂದುವರೆಸಿಕೊಂಡು ಹೋಗಲಿ. ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ ಹಿಂದೂಗಳು ಜಟ್ಕಾ ಮಾಡುವುದಾದರೆ ಮಾಡಲಿ. ಮುಸಲ್ಮಾನರು ನಮ್ಮ ಮನೆಗೆ ಬಂದು ಏನು ಒತ್ತಡ ಹಾಕುವುದಿಲ್ಲ ಹಾಗೇ ನಾವು ಯಾರು ಮುಸಲ್ಮಾನರ ಮನೆಗೆ ಹೋಗಿ ಒತ್ತಡ ಹಾಕುವುದಿಲ್ಲ ಎಂದರು.
ಸಮಾಜವನ್ನು ಒಡೆಯುವ ದಿಕ್ಕಿನಲ್ಲಿ ಕುತಂತ್ರ ಮಾಡಲಾಗುತ್ತಿದೆ, ಈ ವಿಚಾರದಲ್ಲಿ ನಾನು ರಾಜಕಾರಣ ಮಾಡಲು ಇಷ್ಟ ಪಡಲ್ಲ. ಚುನಾವಣೆ ಬಂದಾಗ ಒಬ್ಬರಿಗೊಬ್ಬರು ಬಹಿರಂಗವಾಗಿ ತೊಡೆತಟ್ಟೊಣ ಚುನಾವಣೆ ಬಂದಾಗ ನಾನೇನು ಮಾಡಿದ್ದೇನೆ ನೀನ್ ಏನ್ ಮಾಡಿದ್ದೆ ಜನಗಳ ಮುಂದೆ ಇಡೋಣ ಎಂದರು.
ಹಿಜಬ್ ವಿವಾದ ರಾಜ್ಯದಲ್ಲಿ ಆರಂಭ ಮಾಡಿದ್ದು ಯಾರು? ಹರ್ಷ ಕೊಲೆಯಾದಾಗ ಕಾಂಗ್ರೆಸ್ ಉಗ್ರವಾಗಿ ಯಾಕೆ ಖಂಡಿಸಿಲ್ಲ? ಎಂದು ಪ್ರಶ್ನಿಸಿದ ಈಶ್ವರಪ್ಪ ದೇಶದಲ್ಲಿ ನಿರ್ನಾಮವಾಗಿರುವ ಕಾಂಗ್ರೆಸ್ಸು ಹಿಜಾಬ್, ಹಲಾಲ್ ರಾಷ್ಟ್ರ ಧ್ವಜದ ಬಗ್ಗೆ ಚರ್ಚೆ ಮಾಡುತ್ತಿದೆ. ಮುಸಲ್ಮಾನರನ್ನು ತೃಪ್ತಿ ಪಡಿಸುವ ಪ್ರಯತ್ನ ಒಳ್ಳೆಯದಲ್ಲ ನಾವು ಹುಟ್ಟಿದಾಗಿನಿಂದ ಹಿಂದುತ್ವದವರು ರಾಷ್ಟ್ರಭಕ್ತ ಮುಸಲ್ಮಾನರು,ಸ್ವಾತಂತ್ರ ಹೋರಾಟಗಾರ ಮುಸಲ್ಮಾನರನ್ನು ನಾವು ಗೌರವಿಸುತ್ತೇವೆ ಇಲ್ಲಿ ಅನ್ನ ತಿಂದು ಪಾಕಿಸ್ತಾನದಿಂದ ಜಿಂದಾಬಾದ್ ಅವರನ್ನು ನಾವು ಬಿಡುವುದಿಲ್ಲ. ಹರ್ಷ ಕೊಲೆಯ ಬಗ್ಗೆ ಎನ್ ಐ ಎ ತನಿಖೆಯಲ್ಲಿ ನ್ಯಾಯ ಸಿಗುವ ನಂಬಿಕೆಯಿದೆ ಹಿಂದುಗಡೆಯಿಂದ ಬಂದು ಕೊಚ್ಚಿ ಹೋದವರನ್ನು ಗಂಡಸರು ಎಂದು ಕರೆಯಲು ಸಾಧ್ಯವೇ? ಚುನಾವಣೆ ಬಂದಾಗ ನಾವು ಉತ್ತರ ಕೊಡುತ್ತೇವೆ ಎಂದರು.
Comments are closed.