ನವದೆಹಲಿ: ದೇಶದಲ್ಲಿ ತೈಲ ಬೆಲೆ ಏರಿಕೆಯು ದಿನೇದಿನೇ ಮುಂದುವರೆದಿದ್ದು, ಸೋಮವಾರವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 40 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 110 ರೂ. ಆಗಿದೆ.
ಕಳೆದ 14 ದಿನಗಳಲ್ಲಿ 11 ಬಾರಿ ಬೆಲೆ ಏರಿಕೆ ಮಾಡುವ ಮೂಲಕ ಪೆಟ್ರೋಲ್ ಮತ್ತು ಡಿಸೇಲ್ ದರ ರೂ.8.40 ಏರಿಕೆಯಾಗಿದೆ. 14ನೇ ಬಾರಿಯ ಏರಿಕೆಯ ನಂತರ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ.103.81 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ರೂ.95.07 ತಲುಪಿದೆ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ರೂ.118.83, ಡೀಸೆಲ್ ರೂ. 103.07ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 109.34 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.42 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 113.03 ರೂ. ಡೀಸೆಲ್ ಬೆಲೆ ಲೀಟರ್ಗೆ 97.82 ರೂ. ಆಗಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ರೂ.108.99 ತಲುಪಿದ್ದು, ಡೀಸೆಲ್ ಬೆಲೆ 92.83 ರುಪಾಯಿ ಏರಿಕೆಯಾಗಿದೆ.
Comments are closed.