ಕರಾವಳಿ

ಧಾರ್ಮಿಕ ಕಾರ್ಯಕ್ರಮಕ್ಕೆ ಚಪ್ಪರ ಹಾಕುತ್ತಿದ್ದಾಗ ಕುತ್ತಿಗೆಗೆ ಅಡಿಕೆ ಮರದ ಕಂಬ ಬಿದ್ದು ವ್ಯಕ್ತಿ ಮೃತ್ಯು

Pinterest LinkedIn Tumblr

ಕುಂದಾಪುರ: ಪೂಜಾ ಕಾರ್ಯಕ್ರಮದ ನಿಮಿತ್ತ ಚಪ್ಪರ ಹಾಕುತ್ತಿದ್ದ ವೇಳೆ ಅಡಿಕೆ ಮರದ ಕಂಬ ವ್ಯಕ್ತಿಯೊಬ್ಬರ ಕುತ್ತಿಗೆಗೆ ಬಿದ್ದು ಮೃತಪಟ್ಟಿರುವ ಘಟನೆ ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮದ ಅನಗಳ್ಳಿಬೈಲು ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ರಾಮಚಂದ್ರ ಭಂಡಾರ್ಕರ್ (58) ಎಂದು ಗುರುತಿಸಲಾಗಿದೆ.

ಪೂಜಾ ಕಾರ್ಯಕ್ರಮದ ನಿಮಿತ್ತ ಚಪ್ಪರ ಹಾಕುತ್ತಿದ್ದ ವೇಳೆ ಅಡಿಕೆ ಮರದ ಕಂಬವು ಮೇಲಿಂದ ಜಾರಿದಾಗ ಅದನ್ನು ತಡೆಯಲು ಹೋದ ಸಮಯ ಕಾಲು ಎಡವಿ ಕೆಳಗೆ ಬಿದ್ದಾಗ ಜಾರಿದ ಅಡಿಕೆ ಮರದ ಕಂಬ ರಾಮಚಂದ್ರ ಅವರ ಕುತ್ತಿಗೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.