ಕರಾವಳಿ

ಅನಾರೋಗ್ಯದ ಹಿನ್ನೆಲೆ ಕಲ್ಲಡ್ಕ ಪ್ರಭಾಕರ್ ಭಟ್ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಮಂಗಳೂರು: ಆರ್.ಎಸ್.ಎಸ್ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ.

ರಕ್ತದೊತ್ತಡ ಪರೀಕ್ಷೆಗೆ ನಗರ ಖಾಸಗಿ ಆಸ್ಪತೆಗೆ ಡಾ. ಪ್ರಭಾಕರ್ ಭಟ್ ಅವರು ಭೇಟಿ ನೀಡಿದ್ದರು. ವೈದ್ಯರು ಪರೀಕ್ಷೆ ನಡೆಸಿ ಯಾವುದೇ ಅಪಾಯವಿಲ್ಲ ಎಂದು ತಿಳಿಸಿದ್ದಾರೆ. ಆದರೂ, ನಾಳೆಯ ತನಕ ನಿಗಾದಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Comments are closed.