ಕರಾವಳಿ

ಮಲ್ಪೆ ಐಲ್ಯಾಂಡ್’ಗೆ ಪ್ರವಾಸಕ್ಕೆ ಬಂದಿದ್ದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು

Pinterest LinkedIn Tumblr

ಉಡುಪಿ: ಜಿಲ್ಲೆಯ ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳಲ್ಲಿ ಮೂವರು ನೀರುಪಾಲಾದ ಘಟನೆ ಏ. 7 ಗುರುವಾರ ನಡೆದಿದೆ. ನೀರುಪಾಲಾದ ವಿದ್ಯಾರ್ಥಿಗಳ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮುಳುಗಡೆಯಾದ ಮತ್ತೋರ್ವ ವಿದ್ಯಾರ್ಥಿಗಾಗಿ ಶೋಧ ಮುಂದುವರಿದಿದೆ.

ಮೃತರನ್ನು ಅಲೆನ್ ರೇಜಿ(22), ಅಮಲ್ ಸಿ ಅನಿಲ್ (22) ಎಂದು ಗುರುತಿಸಲಾಗಿದ್ದು, ಅಂಟೋನಿ ಶೆಣೈ (21) ಅವರಿಗಾಗಿ ಶೋಧ ಮುಂದುವರಿದಿದೆ.

ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ತಂಡದಲ್ಲಿ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರಿದ್ದರು. ದ್ವೀಪ ಪ್ರದೇಶದ ಅಪಾಯಕಾರಿ ಸಮುದ್ರ ಭಾಗದಲ್ಲಿ ವಿದ್ಯಾರ್ಥಿಗಳು ನೀರಿಗಿಳಿದಿದ್ದು, ಈ ವೇಳೆ ಆಕಸ್ಮಿಕವಾಗಿ ಮುಳುಗಡೆಯಾಗಿದ್ದಾರೆಂದು ತಿಳಿದುಬಂದಿದೆ.

Comments are closed.